ಶ್ರೀಕ್ಷೇತ್ರ ಹೊಂಬುಜದಲ್ಲಿ ಮೇ. 31, 2025 ರಂದು ಶೃತ ಪಂಚಮಿ ಆಚರಣೆ

ಶ್ರೀ ಕ್ಷೇತ್ರ ಹೊಂಬುಜ, ಮೇ ೨೫, ೨೦೨೫: ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಪೂರ್ವ ಪರಂಪರೆಯಂತೆ ನಡೆದುಕೊಂಡು ಬಂದಿರುವ ‘ಶೃತ ಪಂಚಮಿ ಮಹೋತ್ಸವ’ ವನ್ನು ಮೇ. 31, 2025ರ ಶನಿವಾರದಂದು ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ನೆರವೇರಲಿದೆ.
ಅಂದು 8 ವರ್ಷ ಮೇಲ್ಪಟ್ಟ ಜೈನ ಬಾಲಕ-ಬಾಲಕಿಯರಿಗೆ ಸಾಮೂಹಿಕ ವ್ರತೋಪದೇಶ ಹಾಗೂ ಎರಡರಿಂದ ಮೂರು ವರ್ಷದ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ವಿಶೇಷ ಜಿನಪೂಜೆಯೊಂದಿಗೆ ಶಾಸ್ತ್ರಗಳನ್ನು ಪೂಜಿಸಿ, ಪಠಿಸಿ ಜಿನವಾಣಿಗೆ ಭಕ್ತಿಭಾವದ ನಮನ ಸಲ್ಲಿಸಲಾಗುವುದು. ಸದ್ಧರ್ಮ ಬಾಂಧವರು ಈ ಪೂಜಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಲಾಗಿದೆ. ವ್ರತೋಪದೇಶ ಹಾಗೂ ಅಕ್ಷರಾಭ್ಯಾಸದಲ್ಲಿ ಭಾಗವಹಿಸುವವರು ಶ್ರೀಮಠದ ಆಡಳಿತ ಕಾರ್ಯಾಲಯದಲ್ಲಿ ಸಂಪರ್ಕಿಸಬೇಕಾಗಿ ವಿನಂತಿ.
ಸಂಪರ್ಕ: 08185-262722, 9481453653, 9483801460
– ಶ್ರೀ ಕ್ಷೇತ್ರ ಹೊಂಬುಜ

Shruta Panchami 2025

Leave a Reply

Your email address will not be published. Required fields are marked *